ವಿ ಸೋಮಣ್ಣ ಅವರು ಗೋವಿಂದರಾಜ ನಗರ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಯಾಗಿದ್ದಾರೆ. ಈ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಹಲವಾರು ಉಪಯುಕ್ತ ಕೊಡುಗೆಗಳನ್ನು ನೀಡಿದ್ದಾರೆ. ಈ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ರೂಪಿಸುತ್ತಿದ್ದಾರೆ. ಆರೋಗ್ಯ, ಶಿಕ್ಷಣ, ಗ್ರಂಥಾಲಯ, ಯೋಗ, ಧ್ಯಾನ, ಕುಡಿಯುವ ನೀರಿನ ಘಟಕ, ಸುಸಜ್ಜಿತ ರಸ್ತೆ ಇತ್ಯಾದಿ ಅತ್ಯಾಧುನಿಕ ಮೂಲಸೌಕರ್ಯಗಳ ಮೂಲಕ ಈ ಕ್ಷೇತ್ರ ನಾಡಿನ ಗಮನ ಸೆಳೆದಿದೆ.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಪ್ರತ್ಯೇಕ ಪೊಲೀಸ್ ಠಾಣೆಯ ನಿರ್ಮಾಣಕ್ಕೆ ಅಂದಿನ ಶಾಸಕರಾದ ವಿ. ಸೋಮಣ್ಣ ಅವರು ವಿಶೇಷ ಮುತುವರ್ಜಿಯೊಂದಿಗೆ ಶ್ರಮಿಸಿ ಸಾಕಾರಗೊಳಿಸಿದರು. ಕ್ಷೇತ್ರದ ಜನರ ಸುರಕ್ಷತೆ, ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯೊಂದಿಗೆ ನಿರಂತರ ಸಮನ್ವಯ ಸಾಧಿಸಿ ಈ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದರು.
ಪ್ರತ್ಯೇಕ ಪೊಲೀಸ್ ಠಾಣೆಯ ಸ್ಥಾಪನೆಯಿಂದ ಸಾರ್ವಜನಿಕರಿಗೆ ತ್ವರಿತ ಪೊಲೀಸ್ ಸೇವೆ ದೊರೆಯುವಂತಾಗಿದ್ದು, ಅಪರಾಧ ನಿಯಂತ್ರಣ ಹಾಗೂ ಸಾರ್ವಜನಿಕರ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಲು ಸಾಧ್ಯವಾಗಿದೆ. ಅಭಿವೃದ್ಧಿ ಎಂದರೆ ಕೇವಲ ರಸ್ತೆ, ಕಟ್ಟಡಗಳ ನಿರ್ಮಾಣವಲ್ಲ; ಜನರ ಜೀವ, ಆಸ್ತಿ ಮತ್ತು ನೆಮ್ಮದಿಯ ರಕ್ಷಣೆಯೂ ಅಷ್ಟೇ ಮುಖ್ಯ ಎಂಬುದನ್ನು ವಿ. ಸೋಮಣ್ಣ ಅವರು ತಮ್ಮ ಕಾರ್ಯದ ಮೂಲಕ ತೋರಿಸಿಕೊಟ್ಟಿದ್ದಾರೆ.
ಐದು ದಶಕಗಳ ಹಿಂದಿನ ಮಾಗಡಿ ರಸ್ತೆ ಪೊಲೀಸ್ ಠಾಣೆಗೆ ಕಾಯಕಲ್ಪ ನೀಡುವ ಮೂಲಕ ಕ್ಷೇತ್ರದ ಜನಪ್ರತಿನಿಧಿಯಾಗಿ ವಿ. ಸೋಮಣ್ಣ ಅವರು ಸಾರ್ಥಕ ಕೆಲಸ ಮಾಡಿದ್ದಾರೆ. ಕಾನೂನು ಸುವ್ಯವಸ್ಥೆ ಪಾಲನೆ ಜೊತೆಗೆ ಪೊಲೀಸರು ಉತ್ತಮ ವಾತಾವರಣದಲ್ಲಿ ಕೆಲಸ ಮಾಡಲು, ಅನುವು ಆಗುವಂತೆ ಠಾಣೆಯ ಕಟ್ಟಡ ಸುಸಜ್ಜಿತವಾಗಿ ನಿರ್ಮಾಣವಾಗಿದೆ. 1962ರಲ್ಲಿ ನಿರ್ಮಿಸಲಾಗಿದ್ದ ಹಿಂದಿನ ಕಟ್ಟಡದ ಸ್ಥಳದಲ್ಲಿ ಈಗ ಅತ್ಯಾಧುನಿಕ ವಿನ್ಯಾಸದ ನೂತನ ಕಟ್ಟಡ ರೂಪುಗೊಂಡಿದೆ.
ನೆಲಮಹಡಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರಿ ವಿಭಾಗ, ಉಪ ನಿರೀಕ್ಷಕರ ಕೊಠಡಿ, ಕಂಪ್ಯೂಟರ್ ಹಾಗೂ ದಾಖಲಾತಿ ಕೊಠಡಿ, ಪಿಎಸ್‌ಐ ಕ್ಯಾಬಿನ್ ಒಳಗೊಂಡಿದೆ. ಮೊದಲನೇ ಮಹಡಿಯಲ್ಲಿ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರ ಕಚೇರಿ ಅಪರಾಧ ವಿಭಾಗ, ಆಡಳಿತ ವಿಭಾಗ, ಸಮಾಲೋಚನೆ ಸಭಾಂಗಣ, ಡಿಸಿಪಿ ಕ್ಯಾಬಿನ್ ವ್ಯವಸ್ಥೆ ಕಲ್ಪಿಸಲಾಗಿದೆ. ಎರಡನೇ ಮಹಡಿಯಲ್ಲಿ ಕಂಟ್ರೋಲ್ ರೂಮ್, ಜಿಮ್ ಕೊಠಡಿ ಇದ್ದು, ಇಡೀ ಕಟ್ಟಡಕ್ಕೆ ಲಿಫ್ಟ್ ವ್ಯವಸ್ಥೆ ಸಹ ಕಲ್ಪಿಸಲಾಗಿದೆ.
ಸುಸಜ್ಜಿತವಾದ ಈ ಕಟ್ಟಡದಲ್ಲಿ ಒಂದೇ ಸೂರಿನಡಿ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರ ಕಚೇರಿ, ಮಾಗಡಿ ರಸ್ತೆ ಪೊಲೀಸ್ ಠಾಣೆ, ಸಂಚಾರಿ ಪೊಲೀಸ್ ಠಾಣೆ ಕಾರ್ಯನಿರ್ವಹಿಸುತ್ತಿವೆ.
ಗೋವಿಂದರಾಜ ನಗರದಲ್ಲಿ ಅಭಿವೃದ್ಧಿಪಡಿಸಿದ ಪ್ರಮುಖ ಪಾರ್ಕ್ ಗಳು
66 ಕೆ.ವಿ ಹೈಟೆನ್ಸನ್ ವಿದ್ಯುತ್ ತಂತಿಗಳು ಗೋವಿಂದರಾಜನಗರ ವಿಧಾನ ಸಭಾ ಕ್ಷೇತ್ರದ ಬಹುತೇಕ ಪ್ರದೇಶಗಳಲ್ಲಿ ಹಾದುಹೋಗಿದ್ದವು. 35 ರಿಂದ 40 ವರ್ಷಗಳ ಹಿಂದಿನಿಂದಲೂ ಹೈಟೆನ್ಷನ್ ವಿದ್ಯುತ್ ತಂತಿಗಳ ಕೆಳಭಾಗದಲ್ಲಿ ಸಾವಿರಾರು ಕುಟುಂಬಗಳು ವಾಸಿಸುತ್ತಿದ್ದು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸುಮಾರು 5.5 ಕಿ.ಮೀ ಉದ್ದದ ಎಚ್‌ಟಿ ಲೈನ್ ನ್ನು ಸುಮಾರು 7.5 ಕಿ.ಮೀ ಗಳಷ್ಟು ಭೂಗತ ಕೇಬಲ್ ಆಗಿ ಬದಲಾಯಿಸಲಾಗಿದೆ.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಜಾಜಿನಗರ 6ನೇ ಬ್ಲಾಕ್, ಕೈಗಾರಿಕಾ ಪ್ರದೇಶ, ಡಾ. ಬಿ.ಆರ್. ಅಂಬೇಡ್ಕರ್ ಆಟದ ಮೈದಾನ, ಬಿಆರ್‌ಐ ಕಾಲೋನಿ, ಅಗ್ರಹಾರ ದಾಸರಹಳ್ಳಿ, ಗೋವಿಂದರಾಜನಗರ, ಮಾರೇನಹಳ್ಳಿ, ಮಾರುತಿಮಂದಿರ, ಚಂದ್ರಾಬಡಾವಣೆ, ಗಂಗೊಂಡನಹಳ್ಳಿ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಹಾದು ಹೋಗಿವೆ.
ಗೋವಿಂದರಾಜ ನಗರದಲ್ಲಿ ಅಭಿವೃದ್ಧಿಪಡಿಸಿದ ಪ್ರಮುಖ ಪಾರ್ಕ್ ಗಳು